ನಿರ್ಗತಿಕ ವಿಧವೆಯರಿಗೆ ವಿಧವಾ ವೇತನ

ಹದಿನೆಂಟು ವರ್ಷಕ್ಕಿಂತ ಹೆಚ್ಚು ವಯಸ್ಸಿನ ನಿರ್ಗತಿಕ ವಿಧವೆಯರಿಗೆ ವಿಧವಾ ವೇತನವನ್ನು ಸರ್ಕಾರದ ಆದೇಶದ ಮೇರೆಗೆ 1ನೇ ಏಪ್ರಿಲ್ 1984ರಿಂದ ಕಾರ್ಯಗತ

ನಿರ್ಗತಿಕ ವಿಧವೆ ಅಂದರೆ, ಪತಿಯ ಜೀವಿಸಿಲ್ಲದ ಅಥವಾ ಕಾನೂನು ರೀತ್ಯಾ ಮೃತಪಟ್ಟಿರುವನೆಂದು ಭಾವಿಸುವವನ ಪತ್ನಿ ಮತ್ತು ಅವಳ ಸಂಬಂಧಿಕ ಒಬ್ಬ ಸ್ತ್ರೀ.

ಅರ್ಜಿದಾರಳು ಅಥವಾ ಆಕೆಯ ಮರಣ ಹೊಂದಿದ ಪತಿಯು ಅರ್ಜಿ ದಿನಾಂಕದಿಂದ ಹಿಂದಿನ ನಿರಂತರ ಮೂರು ವರ್ಷಗಳ ಅವಧಿಗೆ ಕಡಿಮೆ ಇಲ್ಲದಂತೆ ಈ ರಾಜ್ಯದ ನಿವಾಸಿಯಾಗಿಬೇಕು.

ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶಗಳಲ್ಲಿ ರೂ.12,000/- ಹಾಗೂ ನಗರ ಪ್ರದೇಶಗಳಲ್ಲಿ ರೂ.17,000/- ಕ್ಕಿಂತ ಕಡಿಮೆ ಇರಬೇಕು.

ವಿಧವಾ ವೇತನದ ಮೊಬಲಗು ತಿಂಗಳಿಗೆ ರೂ.500/-

ಈ ಯೋಜನೆಗೆ ಸಲ್ಲಿಸಬೇಕಾದ ದಾಖಲಾತಿಯ ವಿವರ ಕೆಳಕಂಡಂತಿದೆ.

1. ಪತಿಯ ಮರಣ ಪ್ರಮಾಣ ಪತ್ರ 2. ವಾಸಸ್ಥಳ ದೃಢೀಕರಣ ಪತ್ರ
3. ಆದಾಯ ಪ್ರಮಾಣ ಪತ್ರ
4. ವಯಸ್ಸಿನ ದೃಡೀಕರಣ ಪತ್ರ

ವಿಧವಾ ವೇತನಕ್ಕಾಗಿ ಸಲ್ಲಿಸುವ ಅರ್ಜಿಯು ಗೊತ್ತುಪಡಿಸಿದ ನಮೂನೆಯಲ್ಲಿರಬೇಕು ಮತ್ತು ಅದನ್ನು ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರರಿಗೆ ಸಲ್ಲಿಸಬೇಕು. ಬೇರೆ ಪಿಂಚಣಿ ಪಡೆಯುತ್ತಿರುವವರು ವಿಧವಾ ಅರ್ಹರಾಗುವುದಿಲ್ಲ.

ಮೃತರಾಗುವವರೆಗೆ ಅಥವಾ ಪುನರ್ವಿವಾಹವಾಗುವವರೆಗೆ ಅಥವಾ ಉದ್ಯೋಗ ಪಡೆದು ನಿಗಧಿತ ವಾರ್ಷಿಕ ಆದಾಯಕ್ಕಿಂತ ಹೆಚ್ಚಿನ ಆದಾಯ ಪಡೆಯುವವರೆಗೆ ವಿಧವೆಯ ವಿಧವಾ ವೇತನವನ್ನು ಪಡೆಯಬಹುದು.

ಜನನ ಪ್ರಮಾಣ ಪತ್ರ, ವೈದ್ಯಕೀಯ ದೃಢೀಕರಣ ಪತ್ರ ಅಥವಾ ಭಾರತ ಚುನಾವಣಾ ಆಯೋಗವು ನೀಡಿರುವ ಮತದಾರರ ಗುರುತಿನ ಚೀಟಿಯಲ್ಲಿರುವ ಜನ್ಮ ದಿನಾಂಕವು ವಯಸ್ಸಿಗೆ ಸಂಬಂಧಿಸಿದ ದಾಖಲೆಯಾಗಿರುತ್ತದೆ.


Comments